ಕೃಷಿ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು, ಮಂಡ್ಯ, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆ ಇಂದು ವಿಕಾಸ ಸೌಧದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಕರ್ನಾಟಕದ ರೈತರು ಎದುರಿಸುತ್ತಿರುವ ತಾಂತ್ರಿಕ ಸವ
Agri meeting


ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು, ಮಂಡ್ಯ, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆ ಇಂದು ವಿಕಾಸ ಸೌಧದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಕರ್ನಾಟಕದ ರೈತರು ಎದುರಿಸುತ್ತಿರುವ ತಾಂತ್ರಿಕ ಸವಾಲುಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಲ್ಪಿಸುವ ಜೊತೆ ಕೃಷಿ ವಲಯದಲ್ಲಿ ಸಂಶೋಧನೆ ಹಾಗೂ ನಾವೀನ್ಯತೆಗೆ ಆದ್ಯತೆ ನೀಡುವ ಮೂಲಕ ರಾಜ್ಯವನ್ನು ಕೃಷಿಯಲ್ಲಿ ದೇಶಕ್ಕೇ ಮಾದರಿಯಾಗಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಅತ್ಯುತ್ತಮ ರ‍್ಯಾಂಕಿಂಗ್‌ ಹೊಂದುವ ದಿಶೆಯಲ್ಲಿ ಕಾರ್ಯ ನಿರ್ವಹಿಸಲು ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ವಿಜ್ಞಾನಿಗಳು ಮತ್ತು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande