ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನ ಸಮಿತಿ ಸಭೆ
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನದ ಕುರಿತಂತೆ ನಡೆಯುತ್ತಿರುವ ಅಡಚಣೆಗಳು ಹಾಗೂ ಕ್ರಮಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸಚಿವ
Meeting


ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನದ ಕುರಿತಂತೆ ನಡೆಯುತ್ತಿರುವ ಅಡಚಣೆಗಳು ಹಾಗೂ ಕ್ರಮಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಕೈಗೊಂಡ ತೀರ್ಮಾನಗಳನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೋಸ್ಟರ್ ಜಾರಿಯ ಸಂಬಂಧ ಎಲ್ಲ ಸಮುದಾಯಗಳ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೂ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.

ಜಾತಿ ಪ್ರಮಾಣಪತ್ರ ನೀಡುವ ವಿಧಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯಲ್ಲಿ ಒಂದು ಅವಧಿಗೆ ವಿನಾಯಿತಿ ನೀಡಲಾಗಿದೆ. ಕೆಇಎಯಿಂದ ಈಗಾಗಲೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದೂ ಅವರು ಹೇಳಿದರು.

ಒಳ ಮೀಸಲಾತಿ ಜಾರಿಯ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande