ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಅಗತ್ಯ ಕ್ರಮ : ನಿತೀಶ್ ಕೆ.
ರಾಯಚೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸಲು ಅಗತ್ಯ ಕ್ರಮವಹಿಸಬೇಕೆಂದು ಜಿಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿ
ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಅಗತ್ಯ ಕ್ರಮವಹಿಸಿ: ನಿತೀಶ್ ಕೆ.


ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಅಗತ್ಯ ಕ್ರಮವಹಿಸಿ: ನಿತೀಶ್ ಕೆ.


ರಾಯಚೂರು, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸಲು ಅಗತ್ಯ ಕ್ರಮವಹಿಸಬೇಕೆಂದು ಜಿಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ವಿಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಳಿಜೋಳ ಖರೀದಿ ಕುರಿತು ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೆÇೀರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು 2025-26ನೇ ಸಾಲಿನ ಮುಂಗಾರು ಋತುವಿನಲಿ ಪ್ರತಿ ಕ್ವಿಂಟಾಲ್ ಹೈಬ್ರಿಡ್ ಬಿಳಿಜೋಳಕ್ಕೆ 3699 ರೂ. ಹಾಗೂ ಮಾಲ್ದಂಡಿ ಬಿಳಿಜೋಳಕ್ಕೆ 3749 ರೂ.ಗಳನ್ನು ನಿಗದಿ ಮಾಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳವನ್ನು ಅಧಿಕೃತ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಮುಖಾಂತರ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದರು.

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಎಮ್‍ಸಿ, ಪಿಎಸಿಎಸ್, ಎಫ್‍ಪಿಒಎಸ್, ಎಸ್‍ಹೆಚ್‍ಜಿಎಸ್‍ಗಳಿಂದ ಜಿಲ್ಲೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆದು ದಿನಾಂಕ:01.12.2025 ರಿಂದ 31.03.2026 ರವರೆಗೆ ಬಿಳಿಜೋಳ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯ ಕೈಗೊಳ್ಳಬೇಕು. ಹಾಗೂ ದಿನಾಂಕ:01.01.2026 ರಿಂದ 31.03.2026 ಅವಧಿಯವರೆಗೆ ಕೇಂದ್ರ ಸರ್ಕಾರವು ನಿಗಧಿಪಡಿಸಿರುವ ಎಫ್.ಎ.ಕ್ಕೂ ಮಾನದಂಡಗಳನ್ವಯ ಬಿಳಿಜೋಳ ಖರೀದಿ ಕಾರ್ಯ ಕೈಗೊಳ್ಳಬೇಕೆಂದರು.

ಸರ್ಕಾರದಿಂದ ನೇಮಿಸಲ್ಪಟ್ಟ ನೋಡಲ್ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಕೇಂದ್ರ ಸರ್ಕಾರವು ನಿಗಧಿಪಡಿಸಿದ ಮಾನದಂಡಗಳನ್ವಯ ಬಿಳಿಜೋಳವನ್ನು ಖರೀದಿ ಹಂತದಲ್ಲಿ ಎಫ್‍ಎಕ್ಕೂ ಗುಣಮಟ್ಟವನ್ನು ದೃಢೀಕರಿಸಿ ಪ್ರತಿ ಕೇಂದ್ರದಲಿ ಮೂರನೇ ವ್ಯಕ್ತಿ ಗುಣಮಟ್ಟ ಪರೀಕ್ಷಕರನ್ನು ನೇಮಿಸಲು ಟೆಂಡರ್ ಕರೆಯಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಜಿಲ್ಲೆಗಳಲ್ಲಿನ ಕಾರ್ಯ ಪ್ರಗತಿ ಬಗ್ಗೆ ಆಗ್ನಿಂದಾಗೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಬಯೋಮೆಟ್ರಿಕ್ ಆಧಾರದಲಿಯೇ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಈ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್ ಅವರು ಮಾತನಾಡಿ, ಪ್ರತಿ ರೈತರಿಂದ ಹಿಡುವಳಿಯನ್ನಾಧರಿಸಿ ಪ್ರತಿ ಎಕರೆಗೆ 15 ಕ್ವಿಂಟಾಲ್‍ನಂತೆ ಗರಿಷ್ಠ 150 ಕ್ವಿಂಟಾಲ್ ಬಿಳಿಜೋಳ ಖರೀದಿಸುವುದು. ಬಿಳಿಜೋಳ ಸರಬರಾಜು ಮಾಡಿದ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಚೌವ್ಹಾಣ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಹಮ್ಮದ್ ಅಲಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ಪ್ರಕಾಶ್ , ಎಪಿಎಮ್‍ಸಿ ಸಹಾಯಕ ನಿರ್ದೇಶಕರಾದ ಕೃಷ್ಣ, ರಾಯಚೂರಿನ ಸಹಕಾರ ಸಂಘಗಳ ಉಪ ನಿಬಂಧಕರಾದ ಮನೋಹರ ಸೇರಿದಂತೆ ಜಿಲ್ಲೆಯ ಲಿಂಗಸುಗೂರು ಸಹಾಯಕ ಆಯುಕ್ತರು, ತಾಲೂಕಿನ ತಹಶೀಲ್ದಾರರು ವಿಸಿಯಲ್ಲಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande