ನಾಳೆ ಮೂರನೇ ರಾಷ್ಟ್ರೀಯ ನೇವಾ ಸಮ್ಮೇಳನ
ನವದೆಹಲಿ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಂಸದೀಯ ವ್ಯವಹಾರಗಳ ಸಚಿವಾಲಯದ ಆಶ್ರಯದಲ್ಲಿ ಬರುವ ಗುರುವಾರ ಸಂಸತ್ ಭವನದ ಅನೆಕ್ಸ್‌ನಲ್ಲಿ ರಾಷ್ಟ್ರೀಯ ಇ-ವಿಧಾನ ಅನ್ವಯ (ನೇವಾ) ಕುರಿತ ಮೂರನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ದೇಶದ ನಾನಾ ರಾಜ್ಯಗಳಿಂದ 100 ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದ
Neva


ನವದೆಹಲಿ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಂಸದೀಯ ವ್ಯವಹಾರಗಳ ಸಚಿವಾಲಯದ ಆಶ್ರಯದಲ್ಲಿ ಬರುವ ಗುರುವಾರ ಸಂಸತ್ ಭವನದ ಅನೆಕ್ಸ್‌ನಲ್ಲಿ ರಾಷ್ಟ್ರೀಯ ಇ-ವಿಧಾನ ಅನ್ವಯ (ನೇವಾ) ಕುರಿತ ಮೂರನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ದೇಶದ ನಾನಾ ರಾಜ್ಯಗಳಿಂದ 100 ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕಾಂಗಗಳನ್ನು ಸಂಪೂರ್ಣವಾಗಿ ಡಿಜಿಟಲ್ ಮತ್ತು ಕಾಗದರಹಿತ ಸದನಗಳಾಗಿ ಪರಿವರ್ತಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಈ ಸಮ್ಮೇಳನ ಪರಿಶೀಲಿಸಲಿದ್ದು, ‘ಒಂದು ರಾಷ್ಟ್ರ, ಒಂದು ಅನ್ವಯಿಕೆ’ ಉಪಕ್ರಮವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳನ್ನು ಚರ್ಚಿಸಲಾಗುವುದು. ಶಾಸನಾತ್ಮಕ ಪ್ರಕ್ರಿಯೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಕೃತಕ ಬುದ್ಧಿಮತ್ತೆ ಹಾಗೂ ಇತರ ಹೊಸ ತಂತ್ರಜ್ಞಾನಗಳ ಬಳಕೆಯ ಕುರಿತೂ ಚರ್ಚೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಸಮ್ಮೇಳನದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಜ್ಯ ಸಚಿವ ಡಾ. ಎಲ್. ಮುರುಗನ್, ನಾನಾ ರಾಜ್ಯಗಳ ವಿಧಾನ ಸಭೆ ಕಾರ್ಯದರ್ಶಿಗಳು ಹಾಗೂ ನೇವಾ ಯೋಜನೆಯ ನೋಡಲ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande