ರಾಂಚಿ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಕ್ಷದ ಜಾರ್ಖಂಡ್ ಘಟಕದಲ್ಲಿ ಪ್ರಮುಖ ಬದಲಾವಣೆ ನಡೆದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ರಾಜ್ಯಸಭಾ ಸಂಸದ ಆದಿತ್ಯ ಸಾಹು ಅವರನ್ನು ಜಾರ್ಖಂಡ್ ಬಿಜೆಪಿ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಿಸಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ಅಧಿಕೃತ ಪತ್ರವೊಂದನ್ನು ಬಿಡುಗಡೆ ಮಾಡಿದ್ದು, ಸಾಹು ಅವರ ನೇಮಕ ತಕ್ಷಣದಿಂದ ಜಾರಿಗೆ ಬಂದಿದೆ.
ಆದಿತ್ಯ ಸಾಹು, ರಾಂಚಿ ಜಿಲ್ಲೆಯ ಓರ್ಮಾಂಜಿ ಮೂಲದವರಾಗಿದ್ದು. ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಾಹು ಅವರು, ಪ್ರಾಧ್ಯಾಪಕರ ಜೀವನದಿಂದ ರಾಜಕೀಯಕ್ಕೆ ಪ್ರವೇಶಿಸಿ, ವಿದ್ಯಾರ್ಥಿ ರಾಜಕೀಯದಿಂದಲೇ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ತಮ್ಮ ನಾಯಕತ್ವದ ಕೌಶಲ್ಯವನ್ನು ತೋರಿದ ಸಾಹು, ನಂತರ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.
2022ರಲ್ಲಿ ಸಾಹು ಅವರನ್ನು ಜಾರ್ಖಂಡ್‌ನಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅವರು ಜಾರ್ಖಂಡ್ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತಳಮಟ್ಟದ ಸಂಘಟನಾ ಶಕ್ತಿಯುಳ್ಳ, ಪಕ್ಷದ ಸಿದ್ಧಾಂತಕ್ಕೆ ಬದ್ಧನಾದ ನಾಯಕನಾಗಿ ಸಾಹು ಅವರನ್ನು ಪರಿಗಣಿಸಲಾಗುತ್ತದೆ.
ಮುಂದಿನ ವಿಧಾನ ಸಭಾ ಚುನಾವಣೆಗೆ ಮುನ್ನ ಅವರ ನೇಮಕವನ್ನು ಪಕ್ಷದ ತಂತ್ರಗಾರಿಕೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆ ಎಂದು ಹೇಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa