ಕೋಲಾರ, 0೩ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಶೈಕ್ಷಣಿಕ ವರ್ಷ ೨ ತಿಂಗಳು ಕಳೆದಿದೆ. ರಾಜ್ಯದಲ್ಲಿರುವ ಬಹುತೇಕ ಸರ್ಕಾರಿ ಪದವಿ ಕಾಲೇಜುಗಲ್ಲಿ ೭೦% ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಕಾಲೇಜುಗಳು ಪ್ರಾರಂಭವಾಗಿ ೨ ತಿಂಗಳು ಕಳೆದರು ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು ೧೦,೦೦೦ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಗೊಂದಲದಿಂದಾಗಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಹಾಗೂ ವಿದ್ಯಾರ್ಥಿಗಳು, ಬದುಕು ಆತಂತ್ರ ಸ್ಥಿತಿಯಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಕಾಲೇಜುಗಳಲ್ಲಿ, ಬಡವ, ರೈತ, ಕಾರ್ಮಿಕ, ದಲಿತ, ಹಿಂದುಳಿದ ವಿದ್ಯಾರ್ಥಿಗಳು ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ತುರ್ತಾಗಿ ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವ ಮೂಲಕ ಮಧ್ಯಪ್ರವೇಶಿಸಿ ಆತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಮ ಮಾಡದೇ ಸೇವಾ ಹಿರಿತನದ ಆಧಾರದ ಮೇಲೆ ನೇಮಕ ಮಾಡಬೇಕೆಂದು ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಲ್ಲಿ ಆಯೋಗ ರಚಿಸಬೇಕು ಮತ್ತು ತುರ್ತಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕೆಂದು ಸರ್ಕಾರಿ ಕಾನೂನು ಕಾಲೇಜು ವಿದ್ಯಾರ್ಥಿ ಅಭಿಶ್ರೀ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಮಾಡಿದ್ದಾರೆ.
ಚಿತ್ರ : ಅಭಿಶ್ರೀ
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್