ಬಳ್ಳಾರಿ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಧ್ಯಸ್ಥಿಕೆದಾರರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ವಕೀಲರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ : ಕ್ರಿಮಿನಲ್, ಸಿವಿಲ್, ವೈವಾಹಿಕ ಪ್ರಕರಣಗಳು, ಎನ್‌ಐ ಕಾಯ್ದೆ ಪ್ರಕರಣಗಳು, ವಾಣಿಜ್ಯ ವಿವಾದಗಳು ಮುಂತಾದ ವಿಭಾಗಗಳಲ್ಲಿ ಪರಿಣಿತಿ ಹೊಂದಿರುವ 15 ವರ್ಷಗಳ ಕಾಲ ಅನುಭವ ಹೊಂದಿರುವ ನಿವೃತ್ತ ನ್ಯಾಯಾಧೀಶರು, ವಕೀಲರು, ಮಾಜಿ ಸೈನಿಕರು, ವಿಮಾ ಕಂಪನಿಯ ಅಧಿಕಾರಿಗಳು, ಬ್ಯಾಂಕಿ0ಗ್ ಸಂಸ್ಥೆಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ಶಿಕ್ಷಕರು ಮತ್ತು ವೈದ್ಯರು ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 18 ಸಂಜೆ 5.30 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದ 3 ನೇ ಮಹಡಿಯ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್