ವಿಜಯಪುರ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಹೂವಿನಹಿಪ್ಪರಗಿಯಲ್ಲಿ ನಡೆದಿದೆ. ಬಸಪ್ಪ ರ್‍ಯಾಗೇರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಬೈಕ್ ಸವಾರ. ಇನ್ನೋರ್ವ ಬೈಕ್ ಸವಾರ ಚಂದ್ರಶೇಖರ ಕಲ್ಯಾಣಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಬಾಗೇವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹಿಂದೂಸ್ತಾನ್ ಸಮಾಚಾರ್ / jyothi deshpande