ಸಚಿವ ಶಿವಾನಂದ ಪಾಟೀಲರಿಂದ ಬನ್ನಿ ವಿನಿಮಯ
ವಿಜಯಪುರ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಶುಕ್ರವಾರ ವಿಜಯಪುರ ನಗರದ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯ ಆಚರಿಸಿದರು. ನಗರದ ಜಮಖಂಡಿ ರಸ್ತೆಯಲ್ಲಿರುವ ತಮ್ಮ ತೋಟದ ಮನ
ಬನ್ನಿ


ವಿಜಯಪುರ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಶುಕ್ರವಾರ ವಿಜಯಪುರ ನಗರದ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯ ಆಚರಿಸಿದರು.

ನಗರದ ಜಮಖಂಡಿ ರಸ್ತೆಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ಮಾತ್ರವಲ್ಲದೆ ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ ಜನಸ್ತೋಮದ ಮಧ್ಯೆ ಬನ್ನಿ ವಿನಿಮಯ ಮಾಡಿಕೊಂಡು ವೈರತ್ವ ಮರೆತು ಬನ್ನಿ ತಗೊಂಡ ಬಂಗಾರದಂಗ ಇರೋಣ ಎಂಬ ಸಂದೇಶ ಸಾರಿದರು.

ಶುಕ್ರವಾರ ಬೆಳಿಗ್ಗೆಯಿಂದಲೇ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದ ಮನೆಯ ಆವರಣದಲ್ಲಿ ನೆರೆದಿದ್ದ ಅಪಾರ ಜನಸ್ತೋಮ, ಮಠಾಧೀಶರು, ಮಾಜಿ ಸಚಿವರು, ಹಾಲಿ ಶಾಸಕರು, ರಾಜಕೀಯ ಗಣ್ಯರು, ಮುಖಂಡರು, ರೈತರು, ಸಾರ್ವಜನಿಕರು, ಯುವಕರು, ಮಹಿಳೆಯರು, ಬೆಂಬಲಿಗರು, ಅಭಿಮಾನಿಗಳು, ಸೇರಿದಂತೆ ಸುಮಾರು ಅರ್ಧ ಲಕ್ಷಕ್ಕೂ ಮಿಕ್ಕಿದ ಜನರು ಆಗಮಿಸಿ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.

ತಮಗೆ ಪ್ರೀತಿಯಿಂದ ದಸರಾ ಶುಭಾಶಯ ಕೋರಿದ ಸಾರ್ವಜನಿಕರಿಗೆ ಸಚಿವರೂ ಕೂಡ ಬನ್ನಿ ನೀಡಿ ವಿಜಯ ದಶಮಿ ಹಬ್ಬದ ಶುಭಾಶಯ ಕೋರಿದರು.

ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ವಿಡಿಸಿಸಿ ಬ್ಯಾಂಕ್ ನಿರ್ದೇಶಕಿತಾಗಿರುವ ಪುತ್ರು ಸಂಯುಕ್ತ ಪಾಟೀಲ, ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿರುವ ಪುತ್ರ ಸತ್ಯಜೀತ ಪಾಟೀಲ ಅವರೂ ಉಪಸ್ಥಿತರಿದ್ದು ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬಸವನಬಾಗೇವಾಡಿ ವಿಧಾನ ಸಭೆ ಕ್ಷೇತ್ರ ಸೇರಿದಂತೆ ವಿಜಯಪುರ, ಹಾವೇರಿ, ಬಾಗಲಕೋಟೆ ಜಿಲ್ಲೆಯಿಂದಲೂ ಪಕ್ಷಾತೀತವಾಗಿ ಆಗಮಿಸಿದ್ದ ಜನರು ಸಚಿವ ಶಿವಾನಂದ ಪಾಟೀಲ ಅವರ ಅಭಿಮಾನಿಗಳು, ಕಾಂಗ್ರೆಸ ಮುಖಂಡರು, ಕಾರ್ಯಕರ್ತರು ಸಚಿವರೊಂದಿಗೆ ಬನ್ನಿ ವಿನಿಮಯ ಶುಭಾಶಯ ಕೋರಿದರು.

ಬನ್ನಿ ವಿನಿಮಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜನರಿಗೆ ಬೆಳಿಗ್ಗೆಯಿಂದಲೇ ಉಪಹಾರ, ಮಧ್ಯಾಹ್ನ ಗೋದಿ ಹುಗ್ಗಿ ಸೇರಿದಂತೆ ವಿವಿಧ ಖಾದ್ಯಗಳ ಊಟೋಪಚಾರದ ವ್ಯವಸ್ಥೆ ನಡೆದಿತ್ತು.

ಮತ್ತೊಂದೆಡೆ, ಜಾನಪದ ಕಲಾತಂಡಗಳ ಪ್ರದರ್ಶನ, ವಿರೇಶ ವಾಲಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆದಿತ್ತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande