ಬಳ್ಳಾರಿ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅ.06 ರಂದು ಕೊಪ್ಪಳದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಗಂಗಾವತಿ, ಕೊಪ್ಪಳ ಮತ್ತು ಕಾರಟಗಿ ತಾಲ್ಲೂಕುಗಳಿಂದ ಫಲಾನುಭವಿಗಳನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಒಟ್ಟು 25 ಬಸ್ಸುಗಳನ್ನು ಕೊಪ್ಪಳ ಜಿಲ್ಲೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ಅ.05 ರಂದು ಸಂಜೆ ಮತ್ತು ಅ.06 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ, ಸಂಡೂರು ಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.
ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್