ಬೆಂಗಳೂರು, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಪದವಿಯೇ ಗ್ಯಾರಂಟಿ ಇಲ್ಲದ ಲಾಟರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನ ಕಳೆದಂತೆ ಸ್ವತಂತ್ರ್ಯವಾಗಿ ಅಧಿಕಾರ ನಡೆಸಲು ಸಾಧ್ಯವಾಗದೇ, ಪ್ರತಿ ದಿನ 'ನಾನೇ ಸಿಎಂ ನಾನೇ ಸಿಎಂ' ಹೇಳುವ ದಯನೀಯ ಪರಿಸ್ಥಿತಿ ಬಂದಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ
ಡಿ. ಕೆ. ಶಿವಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಕುರ್ಚಿ ಕನಸನ್ನು ಬೆಂಬಲಿಗರ ಮೂಲಕ ತಿಳಿಸುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಬುಡ ಅಲುಗಾಡುವುದು ಶತಸಿದ್ಧ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಸಿದ್ದರಾಮಯ್ಯ, ಶಿವಕುಮಾರ್ ಪೈಪೋಟಿ ರಾಜಕಾರಣಕ್ಕೆ ಕರ್ನಾಟಕದಲ್ಲಿ ಅಭಿವೃದ್ಧಿ ಕಣ್ಮರೆಯಾಗಿದೆ. ನಿಮ್ಮ ಸ್ವಾರ್ಥದ ಕುರ್ಚಿ ಕಚ್ಚಾಟದಲ್ಲಿ ಕನ್ನಡಿಗರಿಗೆ ಶಿಕ್ಷೆ ನೀಡಬೇಡಿ ಎಂದು ಬಿಜೆಪಿ ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa