ಕೊಪ್ಪಳ : ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕೊಪ್ಪಳ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಬೆಂಗಳೂರಿನಿಂದ
ಕೊಪ್ಪಳ : ಅಕ್ಟೋಬರ್ 4 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ


ಕೊಪ್ಪಳ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಕಾರಟಗಿಗೆ ಆಗಮಿಸಿ ಕನಕಗಿರಿ ವಿಧಾನ ಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ ವಾಸ್ತವ್ಯ ಮಾಡುವರು.

ನಾಳೆ ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಸನ್ಮಾನ್ಯ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊಸಪೇಟೆ ರಸ್ತೆಯ ಅಗಡಿ ಲೇಔಟನಲ್ಲಿ ಕಾರ್ಯಕ್ರಮದ ಸ್ಥಳದ ವೀಕ್ಷಣೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.

ಸಂಜೆ 6 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, 7.30ಕ್ಕೆ ಕಾರಟಗಿಗೆ ತೆರಳಿ ಕನಕಗಿರಿ ವಿಧಾನ ಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ, ಬಳಿಕ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.

ಮುಂದಿನ ಕಾರ್ಯಕ್ರಮಗಳನ್ನು ನಂತರ ತಿಳಿಸಲಾಗುವುದು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande