ಕೋಲಾರ, 0೩ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾನಾ ಇಲಾಖೆಗಳಿಂದ ರೈತರಿಗಾಗಿ ಜಾರಿಗೊಳಿಸಿರುವ ಯೋಜನೆಗಳ ಮಾಹಿತಿ ಪಡೆದು, ರೈತರು ಅಭಿವೃದ್ದಿ ಕಾಣಬೇಕು ಎಂದು ಬಂಗಾರಪೇಟೆ ಕೃಷಿ ರೈತ ಉತ್ಪಾದಕ ಕಂಪನಿಯ ಸಿಇಓ ರಾಜೇಶ್ವರಿ ಹೇಳಿದರು.
ಬಂಗಾರಪೇಟೆ ನಗರದ ಎಪಿಎಂಸಿ ಯಾರ್ಡ್ನಲ್ಲಿ ಬಂಗಾರಪೇಟೆ ರೈತ ಉತ್ಪಾದಕ ಕಂಪನಿ ಹಾಗೂ ಸೆಹಗಲ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹಲವು ಯೋಜನೆಗಳ ಜೊತೆಗೆ ರೈತ ಉತ್ಪಾದಕ ಸಂಸ್ಥೆಗಳ ಬೆಳವಣಿಗೆಗೂ ಹಲವು ಕಾರ್ಯಕ್ರಮಗಳು ಜಾರಿಯಲ್ಲಿವೆ ಎಂದು ತಿಳಿಸಿದರು.
ಸೆಹಗಲ್ ಫೌಂಡೇಶನ್ ಕೂಡ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದು ಶ್ರಮಿಸುತ್ತಿದೆ. ಅರ್ಹರು ಇದರ ಸೌಲಭ್ಯ ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಂಗಾರಪೇಟೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷೆ ಮಂಜುಳಮ್ಮ, ಎಪಿಎಂಸಿ ಇಲಾಖೆಯ ಅಯ್ಯಪ್ಪ, ಜಗನ್ನಾಥ್, ಸೆಹಗಲ್ ಫೌಂಡೇಶನ್ ನವ್ಯ, ಗೋಪಾಲಪ್ಪ, ಆರ್ ಮಂಜುಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್