ಮಾನ್ವಿ : ತಾಯಿ ಮಕ್ಕಳ ಆಸ್ಪತ್ರೆಯ ಸೇವೆ, ಮೆಚ್ಚುಗೆ
ಮಾನ್ವಿ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾನ್ವಿ ಪಟ್ಟಣದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಲಭ್ಯ ಸಂಪನ್ಮೂಲಗಳ ಮೂಲಕ ನೀಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯದ ಅಪರ ಕಾರ್ಯದರ್ಶಿಗಳಾದ ಸುಬೋಧ್ ಯಾದವ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಹತ್ವಾಕಾಂಕ್ಷಿ ಜಿಲ್ಲೆ ಯೋಜ
ಮಾನ್ವಿ : ತಾಯಿ ಮಕ್ಕಳ ಆಸ್ಪತ್ರೆಯ ಸೇವೆ - ಮೆಚ್ಚುಗೆ


ಮಾನ್ವಿ : ತಾಯಿ ಮಕ್ಕಳ ಆಸ್ಪತ್ರೆಯ ಸೇವೆ - ಮೆಚ್ಚುಗೆ


ಮಾನ್ವಿ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾನ್ವಿ ಪಟ್ಟಣದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಲಭ್ಯ ಸಂಪನ್ಮೂಲಗಳ ಮೂಲಕ ನೀಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯದ ಅಪರ ಕಾರ್ಯದರ್ಶಿಗಳಾದ ಸುಬೋಧ್ ಯಾದವ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಜಿಲ್ಲೆಯಲ್ಲಿ ಸೂಚ್ಯಾಂಕಗಳ ಸಾಧನೆ, ಸೇವೆಗಳ ನೀಡುವಿಕೆ, ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಪರಿಶೀಲನೆಯಡಿ ಮಾನ್ವಿ ಪಟ್ಟಣದಲ್ಲಿಯ ತಾಯಿ ಮಕ್ಕಳ ಆಸ್ಪತ್ರೆಗೆ ಅಕ್ಟೋಬರ್ 3ರಂದು ಭೇಟಿ ನೀಡಿ, ಹೆರಿಗೆ ಪೂರ್ವ ನಿಗಾವಣೆ ಕೊಠಡಿ, ಹೆರಿಗೆ ಕೊಠಡಿ, ಬಾಣಂತಿಯರ ಆರೈಕೆ ವಾರ್ಡ್, ನವಜಾತ ಶಿಶು ಆರೈಕೆ ಘಟಕ, ತಾಯಿ ಮಗುವಿನ ಆರೈಕೆ ಚಿಕಿತ್ಸಾ ವಿಧಾನಗಳು, ಒದಗಿಸುವ ಔಷಧಿಗಳ ಕುರಿತು ಪರಿಶೀಲಿಸಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲಿನ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಖುದ್ದು ಮಾತನಾಡಿಸಿ ಸೇವೆಗಳ ನೀಡುವಿಕೆಗೆ ಅವರು ಸಂತಸ ವ್ಯಕ್ತಪಡಿಸಿದರು.

ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ನೀಡುವ ಸೇವೆಗಳನ್ನು ಮನಪೂರ್ವಕವಾಗಿ ನೀಡಿ ಜನರ ಮನಸ್ಸಿಲ್ಲಿ ಸರಕಾರದ ಬಗ್ಗೆ ಗೌರವ ಮೂಡಿಸುವ ಕಾರ್ಯ ಪ್ರತಿಯೊಬ್ಬ ವೈದ್ಯರು ಹಾಗೂ ಸಿಬ್ಬಂದಿಯವರ ಜವಾಬ್ದಾರಿಯಾಗಿದೆ ಎಂದು ಅವರು ಸಲಹೆ ಮಾಡಿದರು.

ಗುಣಮಟ್ಟದ ಸೇವೆಗಳನ್ನು ನೀಡುವಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗದಂತೆ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಇದಕ್ಕು ಪೂರ್ವದಲ್ಲಿ ಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕು ಸಹ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ್‌ಸಿಂಗ್ ಸೋಲಂಕಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಾ ಟಿ. ರೋಣಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ ನಂದಿತಾ. ಎಮ್.ಎನ್. ಜಿಲ್ಲಾ ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಚಂದ್ರಶೇಖರಯ್ಯ ಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್, ತಾಲೂಕು ಆರೋಗ್ಯಾಧಿಕಾರಿ ಡಾ ಶರಣಬಸವರಾಜ್, ಸಿಡಿಪಿಓ ಮನ್ಸೂರು ಅಲಿ, ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಅರವಿಂದ್ ಸೇರಿದಂತೆ ಪ್ರಸೂತಿ ತಜ್ಞರು, ಮಕ್ಕಳ ತಜ್ಞರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande