ಕಂಪ್ಲಿ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಕಂಪ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಕಂಪ್ಲಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮತ್ತು ರಾಮಸಾಗರ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳ ಕಟ್ಟಡವು ತುಂಬಾ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುತ್ತವೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ 150 ಮಕ್ಕಳ ವಾಸಕ್ಕೆ ಅನುಕೂಲಕರವಾಗಿರುವ ಕಂಪ್ಲಿ ಮತ್ತು ರಾಮಸಾಗರ ವ್ಯಾಪ್ತಿಗೆ 02 ಬಾಡಿಗೆ ಕಟ್ಟಡ ಬೇಕಾಗಿದೆ.
ಆಸಕ್ತ ಕಟ್ಟಡ ಮಾಲೀಕರು ಅಕ್ಟೋಬರ್ 10 ರೊಳಗೆ ಕಟ್ಟಡದ ಅಗತ್ಯ ದಾಖಲೆಗಳನ್ನು ನಗರದ ಕೌಲ್ ಬಜಾರ್ ನ ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.9845596262 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್