ಹೊಸಪೇಟೆ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹೊಸಪೇಟೆ ಗ್ರಾಮೀಣ ಶಾಖಾ ವ್ಯಾಪ್ತಿಗೆ ಬರುವ ಧರ್ಮಸಾಗರ ಮತ್ತು ಗಾದಿಗನೂರು ಗ್ರಾಮದಲ್ಲಿ ನಾಳೆ ಬೆ.11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಐಪಿಸೆಟ್‍ನ ಹೊಸ ಲಿಂಕ್‍ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಪೇಟೆ ಗ್ರಾಮೀಣ ಶಾಖಾ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಪಿಕೆ ಹಳ್ಳಿ, ಬೈಲುವದ್ದಿಗೇರಿ, ಧರ್ಮಸಾಗರ, ಗಾದಿಗನೂರು ಮತ್ತು ಭುವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನ ಗ್ರಾಮೀಣ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್