ವಿಜಯಪುರ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಾಗಲಕೋಟೆ ಜಿಲ್ಲೆಯ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಸೆಪ್ಟೆಂಬರ ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ೧೮ನೇ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ರಾಜ್ಯಸಭಾ ಸದಸ್ಯರು, ವಿಧಾನ ಪರಿಷತ್ ಶಾಸಕರು, ವಿಧಾನಸಭೆ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande