ಚಂಡೀಗಡ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೀಪಾವಳಿಗೂ ಮುನ್ನ ಪಂಜಾಬ್ ಪೊಲೀಸರು ಭಾರಿ ಸಂಚನ್ನು ವಿಫಲಗೊಳಿಸಿದ್ದು ಅಮೃತಸರದಲ್ಲಿ ಶಂಕಿತನನ್ನು ಬಂಧಿಸಿದ್ದಾರೆ. ಬಂಧಿತನಿಂದ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.
ಅಮೃತಸರ ಗ್ರಾಮೀಣ ಪೊಲೀಸರು ತರಣ್ ತರಣ್ ಜಿಲ್ಲೆಯ ನಿವಾಸಿ ರವೀಂದರ್ ಸಿಂಗ್ ಅಲಿಯಾಸ್ ರವಿ ಬಂಧಿಸಿದ್ದು, ಆತ ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗಡಿಯಾಚೆಯಿಂದ ಸರಕುಗಳನ್ನು ಸ್ವೀಕರಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.
ಘರಿಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತನ ಸಂಪರ್ಕ ಜಾಲವನ್ನು ಪತ್ತೆಹಚ್ಚಲು ಮುಂದಿನ ತನಿಖೆ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa