ಸಮೀಕ್ಷೆಯಲ್ಲಿ ಯಶಸ್ವಿಗೊಂಡ ಶಿಕ್ಷಕರಿಗೆ ಸನ್ಮಾನ
ವಿಜಯಪುರ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದ್ದು, ಕಡಿಮೆ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ ಬಾಗಲಕೋಟೆ ತಾಲೂಕಿನ ಇಬ್ಬರು ಶಿಕ್ಷಕರನ್ನು ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಡಾ.ಸಿ.ಎಂ.ಕು0ದಗೋಳ ಸನ್ಮಾ
ಸಮೀಕ್ಷೆ


ವಿಜಯಪುರ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದ್ದು, ಕಡಿಮೆ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ ಬಾಗಲಕೋಟೆ ತಾಲೂಕಿನ ಇಬ್ಬರು ಶಿಕ್ಷಕರನ್ನು ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಡಾ.ಸಿ.ಎಂ.ಕು0ದಗೋಳ ಸನ್ಮಾನಿಸಿ ಪ್ರಮಾಣ ಪತ್ರ ನೀಡಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಸಾಮಾಜಿಕ ಮತ್ತು ಶೈಕ್ಷಣಿ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮೀಕ್ಷೆಯಲ್ಲಿ ಪಾಲ್ಗೊಂಡ ತಾಲೂಕಾ ಅಧಿಕಾರಿಗಳಿಗೆ ಸಮೀಕ್ಷೆಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ಆಲಿಸಿದರು.

ನಂತರ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕಂಡು ಬರುವ ಸಮಸ್ಯೆ ಹಾಗೂ ಪರಿಹಾರಗಳ ಕುರಿತು ಚರ್ಚಿ ನಡೆಸಿದರು. ಕಡಿಮೆ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ ತಾಲೂಕಿನ ಇಬ್ಬರ ಸಮೀಕ್ಷೆದಾರರಿಗೆ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಲಾಯಿತು.

ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು, ೪,೭೦,೬೪೮ ಕುಟುಂಬಗಳಿದ್ದು, ಸಮೀಕ್ಷೆ ಕೈಗೊಳ್ಳಲು ೪೩೨೩ ಸಮಿಕ್ಷೇದಾರರನ್ನು ನೇಮಕ ಮಾಡಲಾಗಿದೆ. ಇಲ್ಲಿಯವರೆಗೆ ೩,೨೬,೦೮೧ ಕುಂಟುAಬಗಳ ಸಮೀಕ್ಷೆ ಮಾಡಿ ಶೇ.೬೯.೨೮ ರಷ್ಟು ಪ್ರಗತಿ ಸಾಧಿಸಲಾಗಿದೆ. ಬೀಳಗಿ ತಾಲೂಕು ಶೇ.೭೮.೩೩ ಸಾಧನೆ ಮಾಡಿ ಪ್ರಥಮ ಸ್ಥಾನದಲ್ಲಿದ್ದರೆ, ಬಾಗಲಕೋಟೆ ತಾಲೂಕು ಶೇ. ೫೪.೬೭ ಸಾಧನೆ ಮಾಡಿ ಕೊನೆಯ ಸ್ಥಾನದಲ್ಲಿರುತ್ತದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ. ಜಿ.ಪಂ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಜಮಖಂಡಿ ಉಪ ವಿಬಾಗಾಧಿಕಾರಿ ಶ್ವೇತಾ ಬಿಡೇಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನೀಕೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜಾ ಹಾಗೂ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande