

ಕೂಡ್ಲಿಗಿ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯ ಸೂಲಗಿತ್ತಿ ಅನಕ್ಷರಸ್ತೆ, ಓಬಶೆಟ್ಟಿಹಳ್ಳಿಯ ಶತಾಯುಷಿ ಈರಮ್ಮ ಅವರಿಗೆ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. ಈರಮ್ಮ ಅವರು ಎಪ್ಪತ್ತು ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತ ಮತ್ತು ಆರೋಗ್ಯಯುತ ಹೆರಿಗೆಯನ್ನು ಉಚಿತವಾಗಿ ನಡೆಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್