ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ದೇಣಿಗೆ ನೀಡಲು ಮನವಿ
ಕೊಪ್ಪಳ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಜರೂರಾದ ಅವಶ್ಯಕ
ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ದೇಣಿಗೆ ನೀಡಲು ಮನವಿ


ಕೊಪ್ಪಳ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಜರೂರಾದ ಅವಶ್ಯಕತೆಯಾಗಿರುತ್ತದೆ. ಈ ಪದ್ಧತಿಯು ದೇಶದ ಮುಂದಿರುವ ಕಠಿಣ ಸವಾಲಾಗಿದ್ದು, ಈ ಸಮಸ್ಯೆಯು ಒಂದು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಯಾಗಿದ್ದು, ಅನಕ್ಷರತೆ ಹಾಗೂ ಬಡತನಕ್ಕೆ ಹೊಂದಿಕೊಂಡಿರುತ್ತದೆ. ಆದುದರಿಂದ ಸಮಾಜದ ಸಂಘಟಿತ ಪ್ರಯತ್ನ ಹಾಗೂ ಹೋರಾಟದಿಂದ ಮಾತ್ರ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕವನ್ನು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶವನ್ನು ಹೊಂದಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ, ರಕ್ಷಣೆ, ಪುನರ್ವಸತಿ, ಶೈಕ್ಷಣಿಕ ಕಿಟ್ ನೀಡುವುದು ಹಾಗೂ ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಜನ ಜಾಗೃತಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ (ಐಇಸಿ) ಚಟುವಟಿಕೆಗಳನ್ನು ಆಯೋಜಿಸುವುದು ಹಾಗೂ ತರಬೇತಿ ಕಾರ್ಯಕ್ರಮಗಳು, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಾಹಿತಿ ನೀಡಿ ಪ್ರಕರಣ ಸಾಬೀತಾದ ನಂತರ ಮಾಹಿತಿ ನೀಡಿದವರಿಗೆ ಪ್ರೋತ್ಸಾಹಧನ ಹಾಗೂ ಸಹಾಯಧನ ನೀಡುವುದು ಮತ್ತು ತಪಾಸಣೆ, ದಾಳಿಗಳಲ್ಲಿ ರಕ್ಷಿಸಲಾದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಪುನರ್ವಸತಿಗೊಳಿಸುವುದರ ಮೂಲಕ ಅವರ ಬದುಕಿಗೆ ಆಶ್ರಯ ಕಲ್ಪಿಸಿ ಮುಖ್ಯವಾಹಿನಿಗೆ ತರುವ ಈ ಸಮಾಜಮುಖಿ ಕಾರ್ಯಕ್ಕೆ ಅಗತ್ಯವಿರುವ ನೆರವನ್ನು ನೀಡಲು ಎಲ್ಲಾ ಕೈಗಾರಿಕೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗದಾತರಲ್ಲಿ ಈ ಮೂಲಕ ಕೋರಲಾಗಿದೆ.

(ಆದಾಯ ತೆರಿಗೆ ಇಲಾಖೆಯಲ್ಲಿ 12ಎ ಮತ್ತು 80ಜಿ, ಅಡಿ ವಿನಾಯಿತಿ ಹಾಗೂ Ministry of Corporate Affairs, Government of India ಇವರಿಂದ ಸಿಎಸ್‍ಆರ್ ಚಟುವಟಿಕೆಗಳನ್ನು ನಡೆಸಲು ಅನುಮತಿ ಪಡೆಯಲಾಗಿರುತ್ತದೆ.)

ಮೇಲ್ಕಂಡ ಅಂಶಗಳ ಅನುಷ್ಠಾನಕ್ಕಾಗಿ ದೇಣಿಗೆ ನೀಡಲು ಬಯಸುವ ಉದ್ಯೋಗದಾತರು, ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಸಾರ್ವಜನಿಕರು ದೇಣಿಗೆಯನ್ನು ನೇರವಾಗಿ ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ Canara Bank Account Number: 110058103941, IFSC

Code: CNRB0007295, Bangalore Workers Welfare Board Branch, Bangalore ಖಾತೆಗೆ ಜಮೆ ಮಾಡಲು ಈ ಮೂಲಕ ವಿನಂತಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ(ಕಾರ್ಮಿಕ ಇಲಾಖೆ)ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande