ನಾಟಿ ಕೋಳಿ ಮರಿಗಳ ನೀಡುವ ಯೋಜನೆಗೆ ಮಹಿಳೆಯಿಂದ ಅರ್ಜಿ ಆಹ್ವಾನ
ರಾಯಚೂರು, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಮಾನವಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿಮರಿಗಳನ್ನು ನೀಡುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 5 ವಾರದ ನಾಟಿ ಕೋಳಿಮರಿಗಳನ್ನು ಉತ್ಪಾದ
ನಾಟಿ ಕೋಳಿ ಮರಿಗಳ ನೀಡುವ ಯೋಜನೆಗೆ ಮಹಿಳೆಯಿಂದ ಅರ್ಜಿ ಆಹ್ವಾನ


ರಾಯಚೂರು, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಮಾನವಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿಮರಿಗಳನ್ನು ನೀಡುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

5 ವಾರದ ನಾಟಿ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಸಾಮಾನ್ಯ ವರ್ಗದರೈತ ಮಹಿಳೆಯರಿಗೆ ತಲಾ 20ರಂತೆ ವಿತರಿಸುವ ಕಾರ್ಯಕ್ರಮವನ್ನು ಮಾರ್ಗಸೂಚಿಯನ್ವಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇವರ ಅಧ್ಯಕ್ಷತೆಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ತೀರ್ಮಾನಿಸಿದೆ.

ಈ ಯೋಜನೆಯಡಿ ನಂಜುಂಡಪ್ಪ ವರದಿಯ ಪ್ರಕಾರ ಜಿಲ್ಲೆಯ ಹಿಂದುಳಿದ ತಾಲ್ಲೂಕು ಮಾನವಿಗೆ ಮಾತ್ರ ಅನ್ವಯವಾಗುವಂತೆ ಮೀಸಲಾತಿಯನ್ನನುಸರಿಸಿ ಪರಿಶಿಷ್ಟ ಜಾತಿ ವರ್ಗದವರಿಗೆ 17, ಪರಿಶಿಷ್ಟ ಪಂಗಡ ವರ್ಗದವರಿಗೆ 7, ಹಿಂದುಳಿದ ವರ್ಗದವರಿಗೆ 32 ಮತ್ತು ಸಾಮಾನ್ಯ ವರ್ಗದವರಿಗೆ 43ರಂತೆ ಒಟ್ಟು 99 ಫಲಾನುಭವಿಗಳ ಗುರಿಗಳನ್ನು ಸರ್ಕಾರದಿಂದ ನಿಗದಿಪಡಿಸಲಾಗಿದೆ.

ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗೆ 5 ವಾರದ 20 ನಾಟಿ ಕೋಳಿಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಈ ಯೋಜನೆಯಡಿ ಬಡತನರೇಖೆಗಿಂತ ಕೆಳಗಿರುವ ರೈತ ಮಹಿಳೆಯರಿಗೆ, ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರಿಗೆ, ರೈತಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರಿಗೆ ಆದ್ಯತೆ ನೀಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಸಕ್ತರು ಡಿಸೆಂಬರ್ 01ರೊಳಗಾಗಿ ಅರ್ಜಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಾನವಿಯ ಪಶು ಆಸ್ಪತ್ರೆಯ ದೂರವಾಣಿ ಸಂಖ್ಯೆ: 08532-235350ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಮಾನವಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಹಿರೇಮಠ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande