
ಬೆಂಗಳೂರು, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು.
ರಾಜ್ಯಪಾಲರೊಂದಿಗೆ ಮಾತನಾಡಿ ವೈದ್ಯರಿಂದ ಚಿಕಿತ್ಸೆಯ ವಿವರ ತಿಳಿಸಿಕೊಂಡ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜೊತೆಗೆ ಮಣಿಪಾಲ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಆಸ್ಪತ್ರೆ ಮೂಲಗಳ ಪ್ರಕಾರ ರಾಜ್ಯಪಾಲರ ಆರೋಗ್ಯದಲ್ಲಿ ಕ್ರಮೇಣ ಸುಧಾರಣೆ ಕಂಡುಬಂದಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa