ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ ಚಿತ್ರದುರ್ಗ ವೈದ್ಯಕೀಯ ಕಾಲೇಜು ಸ್ಥಳಾಂತರ
ಬೆಂಗಳೂರು, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ಹೊರವಲಯದಲ್ಲಿನ ಕುಂಚಿಗನಾಳು ಬಳಿ ನಿರ್ಮಿಸಲಾಗುತ್ತಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಬಳಸಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್
Shift


ಬೆಂಗಳೂರು, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗದ ಹೊರವಲಯದಲ್ಲಿನ ಕುಂಚಿಗನಾಳು ಬಳಿ ನಿರ್ಮಿಸಲಾಗುತ್ತಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಬಳಸಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸಮ್ಮತಿ ಸೂಚಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯೋಜನಾ ಹಾಗೂ ಸಾಂಖ್ಯಿಕ ಸಚಿವರು ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ವಿವಿಧ ವಿಭಾಗಗಳ ಬಳಕೆಗಾಗಿ ನಿರ್ಣಯ ಕೈಗೊಳ್ಳಲಾಗಿದ್ದು, ವೈದ್ಯಕೀಯ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು, ವೈದ್ಯಕೀಯ ಕಾಲೇಜು ಸ್ಥಳಾಂತರ ಸಂಬಂಧ ಈಗಾಗಲೇ ಆದೇಶ ಹೊರಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪರಿಣಿತ ಅಧಿಕಾರಿಗಳ ಸಮಿತಿಯು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಈ ಕುರಿತು ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚಿಸಿದ್ದಾರೆ.

ವೈದ್ಯಕೀಯ ಕಾಲೇಜಿಗೆ ಬಳಸಲು ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಕೂಡಲೇ ವೈದ್ಯಕೀಯ ಕಾಲೇಜನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಿಎಂಸಿಆರ್‍ಐ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಮಾತನಾಡಿ, ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಜ್ಞಾನಗಂಗೋತ್ರಿ ಆವರಣದಲ್ಲಿ 2023-24 ರಲ್ಲಿ 03 ಕೊಠಡಿಗಳನ್ನು ಎಂ.ಒ.ಯು ಮೂಲಕ ಪಡೆದಿದ್ದು, ಇನ್ನೂ ಹೆಚ್ಚಿನ 09 ಕೊಠಡಿಗಳು ದಾವಣಗೆರೆ ವಿಶ್ವವಿದ್ಯಾಲಯದಿಂದ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಕೋರಿದರು.

ಎಂಬಿಬಿಎಸ್ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಕ್ಕಾಗಿ ಬಸ್‍ಗಳು ಇಲ್ಲದೇ ಇರುವುದರಿಂದ ಈ ಸಂಸ್ಥೆಗೆ ಕನಿಷ್ಠ 04 ಬಸ್‍ಗಳು ಅವಶ್ಯಕವಾಗಿದ್ದು ಪೂರೈಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದಾಗ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಡಿಎಂಎಫ್ ಅಥವಾ ಸಿಎಸ್‍ಆರ್ ಅನುದಾನದಲ್ಲಿ ಚಿತ್ರದುರ್ಗ ವೈದ್ಯಕೀಯ ಸಂಸ್ಥೆಗೆ 04 ಬಸ್‍ಗಳನ್ನು ಒದಗಿಸಲು ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಸಚಿವರ ಸಹಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande