ಪದವಿ ಎಂಬುದು ವಿದ್ಯಾರ್ಥಿ ಜೀವನದ ಬಹುದೊಡ್ಡ ತಿರುವು : ಗುಂಡೂರಾವ್
ಬೆಂಗಳೂರು, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪದವಿ ಎಂಬುದು ವಿದ್ಯಾರ್ಥಿ ಜೀವನದ ಬಹುದೊಡ್ಡ ತಿರುವು. ದೇಶದ ಅತ್ಯುನ್ನತ ಪರೀಕ್ಷೆಗಳಾದ ನಾಗರಿಕ ಸೇವಾ ಪರೀಕ್ಷೆಯಿಂದ ಹಿಡಿದು ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯಬೇಕಾದರೆ ಪದವಿ ಅತಿ ಮುಖ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರ
Gundurao


ಬೆಂಗಳೂರು, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪದವಿ ಎಂಬುದು ವಿದ್ಯಾರ್ಥಿ ಜೀವನದ ಬಹುದೊಡ್ಡ ತಿರುವು. ದೇಶದ ಅತ್ಯುನ್ನತ ಪರೀಕ್ಷೆಗಳಾದ ನಾಗರಿಕ ಸೇವಾ ಪರೀಕ್ಷೆಯಿಂದ ಹಿಡಿದು ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯಬೇಕಾದರೆ ಪದವಿ ಅತಿ ಮುಖ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ರಂಗಮಂದಿರದಲ್ಲಿ ಸರ್ಕಾರಿ ಯುನಾನಿ ವೈದ್ಯಕೀಯ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪಾಲಕರು ಹಾಜರಿದ್ದೀರಿ. ನಿಮ್ಮ ನಿಮ್ಮ ಮಕ್ಕಳ ಪದವಿ‌ ಸ್ವೀಕಾರ ಕಾರ್ಯಕ್ರಮ ನಿಮಗೊಂದು ಹಬ್ಬವಿದಂತೆ. ಪದವಿ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ದುಡಿಯುವ ಸಾಮಾರ್ಥ್ಯ ಇಂದಿನಿಂದ ನಿಮ್ಮ ಕೈ ಸಿಗಲಿದೆ. ಅತಿ ಹೆಚ್ಚು ಹೆಣ್ಣು ಮಕ್ಕಳು ಇಂದು ಪದವಿ ಪಡೆದುಕೊಳ್ಳುತ್ತಿರುವುದು ನನಗೆ ತುಂಬ ಸಂತೋಷವಾಗುತ್ತಿದೆ. ಸಮಾಜದಲ್ಲಿ ಒಬ್ಬ ವ್ಯಕ್ತಿಯ ಮೌಲ್ಯವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಎಲ್ಲಾ ವಿಧ್ಯಾರ್ಥಿಗಳ ಮುಂದಿ‌ನ ಜೀವನ ಉಜ್ವಲವಾಗಿರಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande