
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯಡಿ ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ 5000 ರೂ. ಮೌಲ್ಯದ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 2000 ರೂ. ಮೌಲ್ಯದ ಉತ್ತಮ ಗುಣಮಟ್ಟದ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಪ್ರಸಕ್ತ ಸಾಲಿನ ಪಹಣಿ, ಆಧಾರ ಕಾರ್ಡ್ ಜಿರಾಕ್ಸ್, ಜಾತಿ ಪ್ರಮಾಣ ಪತ್ರ ಗಳೊಂದಿಗೆ ಆಯಾ ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು, ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ ಕೋಟಿಮನಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್