
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮೇದಾ, ಮೇದಾರಿ, ಗೌರಿಗ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಮನೋಭಾವ ಹೊಂದಿರುವ 05 ನಾಮ ನಿರ್ದೇಶಿತ ಸದಸ್ಯತ್ವಕ್ಕೆ ಆಸಕ್ತ ಸಮುದಾಯದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಅವರು ತಿಳಿಸಿದ್ದಾರೆ.
ಈ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ನವೆಂಬರ್ 04 ರೊಳಗೆ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್