
ರಾಯಚೂರು, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹತ್ತಿ ಬೇಲುಗಳನ್ನು ಗುರುವಾರ ಬೆಳಗ್ಗೆ ತುಂಬಿಕೊಂಡು ಗಾರಲದಿನ್ನಿ ಸಮೀಪ ಸಾಗುತ್ತಿದ್ದ ಪಿಕ್ ಅಪ್ ವಾಹನದ ಚಾಲಕನಿಗೆ ಮಾರ್ಗ ಮಧ್ಯದಲ್ಲಿಯೇ ಹೃದಯಾಘಾತ ಸಂಭವಿಸಿ, ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಣ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತನನ್ನು ನರಸಿಂಹ (33) ಎಂದು ಪೊಲೀಸರು ತಿಳಿಸಿದ್ದಾರೆ. ಪಿಕ್ ಅಪ್ ವಾಹನ ಚಾಲಕ ನರಸಿಂಹನು ವಾಹನದಲ್ಲಿ ಹತ್ತಿ ಬೇಲುಗಳನ್ನು ತುಂಬಿಕೊಂಡು ರಾಯಚೂರು ಮಾರುಕಟ್ಟೆ ಕಡೆ ಬರುತ್ತಿದ್ದಾಗ ಎದೆನೋವು ಕಾಣಿಸಿಕೊಂಡು, ವಾಹನದ ನಿಯಂತ್ರಣ ತಪ್ಪಿ ಪಕ್ಕದ ಜಮೀನಿಗೆ ಬಿದ್ದಿದೆ. ಆಗ, ವಾಹನವು ಚಾಲಕನ ಮೇಲೆ ಬಿದ್ದು ಆತನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ಧಾರೆ. ಪ್ರಕರಣ ದಾಖಲಾಗಿದೆ, ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್