ನಾನಾ ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ, ನವೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು
Pre meeting


ಧಾರವಾಡ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ, ನವೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ. ಜಯಂತಿಗಳ ಪ್ರಯುಕ್ತ ಪ್ರೌಢ ಶಾಲೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande