
ಸಿಂಧನೂರು, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿಂಧನೂರಿನ ವೀರಶೈವ ಸಮಾಜದ ಹಿರಿಯರು, ಸಾಹಿತಿಗಳು, ನಿವೃತ್ತ ಪ್ರಾಂಶುಪಾಲರಾದ ಪ್ರೊ. ಶಾಶ್ವತಸ್ವಾಮಿ ಮುಕ್ಕುಂದಿಮಠ ಅವರು ಗುರುವಾರ ಬೆಳಗ್ಗೆ ಮೃತಪಟ್ಟಿದ್ದು ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ 10 ಗಂಟೆಗೆ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಗುರು ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮೃತರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ. ಸಿಂಧನೂರಿನ ಉಪ್ಪಾರ ಓಣಿಯಲ್ಲಿರುವ ಖಂಡಿಮಠ ಚೌಕಿಯಲ್ಲಿ ಗುರು - ಹಿರಿಯರು, ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಸಿಂಧನೂರು ತಾಲೂಕ ಜಂಗಮ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್