ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತ್ತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಪ್ರಶಸ್ತಿ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚಾರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪ್ರಕರಣವು 01ನೇ ಆಗಸ್ಟ್ 2024 ರಿಂದ 31ನೇ ಜುಲೈ 2025 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ ರೂ.10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಮಕ್ಕಳ ದಿನಾಚರಣೆ-2025ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 04 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಎಸ್‍ಸಿ ವೃತ್ತದ ಬಳಿಯ ದೇವಿನಗರದ ಸ್ತ್ರೀಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande