ಬಿಹಾರ ಚುನಾವಣೆ ; ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಪ್ರಚಾರ
ನವದೆಹಲಿ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳ ಪರ ಅವರು ರಾಜ್ಯದಲ್ಲಿ ಎರಡು ಪ್ರಮುಖ ಸಾರ್
Nadda


ನವದೆಹಲಿ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳ ಪರ ಅವರು ರಾಜ್ಯದಲ್ಲಿ ಎರಡು ಪ್ರಮುಖ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.

ಬಿಜೆಪಿಯ ಅಧಿಕೃತ ಎಕ್ಸ ಖಾತೆಯಲ್ಲಿ ನೀಡಿರುವ ವೇಳಾಪಟ್ಟಿಯ ಪ್ರಕಾರ, ನಡ್ಡಾ ಅವರು ಮಧ್ಯಾಹ್ನ 12:40 ಕ್ಕೆ ಪಾಟ್ನಾದ ಪಟೇಲ್ ಗೋಲಾಂಬರ್‌ಗೆ ಆಗಮಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ನಂತರ ಮಧ್ಯಾಹ್ನ 2 ಗಂಟೆಗೆ ಬಕ್ಸಾರ್ ಜಿಲ್ಲೆಯ ಬ್ರಹ್ಮಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.

ಸಂಜೆ 4 ಗಂಟೆಗೆ ನಡ್ಡಾ ಪಾಟ್ನಾ ಜಿಲ್ಲೆಯ ವಿಕ್ರಮ್‌ನ ಪಾರ್ವತಿ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯುವ ಮತ್ತೊಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande