
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಜನಪ್ರತಿನಿಧಿಗಳ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಅಖಿಲ ಭಾರತ ಜನಗಣ ಒಕ್ಕೂಟ ತಿಳಿಸಿದೆ.
ಅಖಿಲ ಭಾರತ ಜನಗಣ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರ ಎನ್. ಗಂಗಿರೆಡ್ಡಿ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗಾಗಿ ಉತ್ತರ ಕರ್ನಾಟಕ ಹೋರಾಟ ಸಮಿತಿಯು ಒಂದು ಕೋಟಿಗೂ ಅಧಿಕ ಜನರಿಂದ ಜನ ಅಭಿಪ್ರಾಯ ಸಂಗ್ರಹಿಸಲಾಗಿದೆ. ನವಂಬರ್ ಒಂದರಿಂದ ಉತ್ತರ ಕರ್ನಾಟಕ ಭಾಗದ 15 ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಇವರೆಲ್ಲರ ಸಹಿ ಸಂಗ್ರಹಣೆ ಮಾಡಲಾಗುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದ 15 ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ವಿಜಯನಗರ ಮತ್ತು ರಾಯಚೂರು ಹೀಗೆ 15 ಜಿಲ್ಲೆಗಳ ಪ್ರತ್ಯೇಕ ರಾಜ್ಯ ರಚನೆ ಆಗಬೇಕಾಗಿದೆ ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್