ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಸಲಹೆ
ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಸಲಹೆ
ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮzಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದ್ದಾರೆ.


ಕೋಲಾರ, ೩೧ ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಎಲ್ಲಾ ಪಶುಪಾಲಕರು ತಮ್ಮ ಜಾನುವಾರುಗಳಿಗೆ ತಪ್ಪದೇ ೮ನೇ ಸುತ್ತಿನ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಬೇಕು ಬೇಕೆಂದು ರೈತರಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ೩ನೇ ನವೆಂಬರ್ ನಿಂದ ೨ನೇ ಡಿಸಂಬರ್ ವರೆಗೆ ಹಮ್ಮಿಕೊಂಡಿರುವ ಲಸಿಕಾ ಆಭಿಯಾನದಲ್ಲಿ ತಪ್ಪದೇ ಪಾಲ್ಗೋಂಡು ತಮ್ಮ ಜಾನುವರುಗಳಿಗೆ ಲಸಿಕೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ. ರಮೇಶ್.ಜಿ.ಎಂ. ರವರು ಮಾತನಾಡಿ, ಕಾಲು ಬಾಯಿ ಜ್ವರ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಒಂದು ರಾಸುವಿನಿಂದ ಇನ್ನೊಂದು ರಾಸುವಿಗೆ ನೇರ ಸಂಪರ್ಕ ಹಾಗೂ ಗಾಳಿಯ ಮುಖಾಂತರ ಬೇಗನೆ ಹರಡುತ್ತದೆ. ಈ ರೋಗವನ್ನು ನಿಯಂತ್ರಿಸಲು ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸುವುದೊಂದೇ ಮಾರ್ಗವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ೧೯೩೬೯೪ ದನ ಹಾಗೂ ೧೬೪೪೯ ಎಮ್ಮೆಗಳಿಗೆ, ಒಟ್ಟು ೨೧೦೧೪೩ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಜಿಲ್ಲೆಯಲ್ಲಿ ಒಟ್ಟು ೬೯ ಲಸಿಕಾ ಮೇಲ್ವಚಾರಕರು ಹಾಗೂ ೩೩೮ ಲಸಿಕಾದಾರರನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಉಚಿತ ಆಂಬುಲೆನ್ಸ್ ಸೇವೆ ಪಡೆಯಬೇಕೆಂದು ರೈತರಿಗೆ ಅರಿವು ಮೂಡಿಸಬೇಕೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಇದೇ ಸಂಧರ್ಭದಲ್ಲಿ ೮ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಕರಪತ್ರ & ಭಿತ್ತಿಪತ್ರ ಬಿಡುಗಡೆ ಮಾಡಿದರು.

ಸಭೆಯಲ್ಲಿ ಕೋಲಾರ ಜಿಲ್ಲಾ ಪಂಚಾಯತಿಯ ಮುಖ್ಯ ನಿರ್ವಹಣಾಧಿಕಾರಿಗಳಾದ ಡಾ.ಪ್ರವೀಣ್.ಪಿ. ಬಾಗೇವಾಡಿ, ಕೋಲಾರ ಜಿಲ್ಲಾ ಪೊಲೀಸ್ ನಿರೀಕ್ಷಕರಾದ ಡಾ.ಬಿ.ನಿಖಿಲ್,ಪಶುಪಾಲನಾ & ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ.ರಮೇಶ್.ಜಿ.ಎಂ, ಕೋಲಾರ ಜಿಲ್ಲಾ ಹಾಲು ಒಕ್ಕೂಟ ಮಂಡಳಿಯ ವ್ಯವಸ್ಥಾಪಕರಾದ ಡಾ.ಚೇತನ್,ಡಾ.ಲೋಕೇಶ್ ಜೆ.ವಿ.ಡಾ.ವಿಜಯ್ ಪಾಟಿಲ್, ಡಾ.ವೀಣಾ,ಡಾ.ಅನುರಾಧ,ಡಾ. ಸುದರ್ಶನ್,ಡಾ.ತ್ರಿಮೂರ್ತಿನಾಯಕ್,ಡಾ.ಸುಬನ್, ಡಾ.ಸುರೇಶ್,ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದ್ದಾರೆ.

-

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande