
ವಿಜಯಪುರ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ಮುಖ್ಯ ಏರು ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆಯಾಗುತ್ತಿರುವ ದುರಸ್ತಿ ಕಾಮಗಾರಿಯನ್ನು ಜಲ ಮಂಡಳಿಯಿ0ದ ಕೈಗೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ದಿನಾಂಕ : 02-11-2025ರಂದು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಸರಬರಾಜುವಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊ0ದಿಗೆ ಸಹಕರಿಸುವಂತೆ ಜಲಮಂಡಳಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande