
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯು ಈಗಾಗಲೇ ಚಾಲ್ತಿಯಲ್ಲಿದ್ದು, ಸಮೀಕ್ಷಾ ಅವಧಿಯನ್ನು ನವೆಂಬರ್ 21 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ (ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ) ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿಯನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಮೊದಲ ಬಾರಿಗೆ ರಾಜ್ಯಾದ್ಯಾಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆ ನಡೆಸಲಾಗುತ್ತಿದೆ.
ಅರ್ಹ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ನೀಡಿ ತಮ್ಮ ಹೆಸರು ಹಾಗೂ ವಿವರಗಳನ್ನು ನೋಂದಾಯಿಸಿಕೊಳ್ಳಬಹುದು.
ಸಮೀಕ್ಷೆ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 18005992025 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್