ಮಾಜಿ ಪ್ರಧಾನಿ ಇಂದಿರಾ ಗಾಂಧಿ 41ನೇ ಪುಣ್ಯತಿಥಿ
ನವದೆಹಲಿ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 41ನೇ ಪುಣ್ಯತಿಥಿಯ ಅಂಗವಾಗಿ ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಇಂದಿರಾ ಗಾಂಧಿ ಸ್ಮಾರಕದಲ್ಲಿ ಪುಷ್ಪಾ
death anniversary


ನವದೆಹಲಿ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 41ನೇ ಪುಣ್ಯತಿಥಿಯ ಅಂಗವಾಗಿ ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಇಂದಿರಾ ಗಾಂಧಿ ಸ್ಮಾರಕದಲ್ಲಿ ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಲವು ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ರಾಷ್ಟ್ರ ನಿರ್ಮಾಣ ಮತ್ತು ದೇಶದ ಏಕತೆಗಾಗಿ ಇಂದಿರಾ ಗಾಂಧಿಯವರ ತ್ಯಾಗ ಮತ್ತು ಕೊಡುಗೆಯನ್ನು ಸ್ಮರಿಸಿದರು.

ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರನ್ನು 1984ರ ಅಕ್ಟೋಬರ್ 31ರಂದು ಅವರದೇ ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande