
ಹೊಸಪೇಟೆ, 31 ಅಕ್ಟೋಬರ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ನಾಳೆ ಬೆ.10 ಗಂಟೆಗೆ, ಹೊಸಪೇಟೆ ಸಾಯಿಲೀಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೊಸಪೇಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೂಜ್ ಖಾನ್ ಇವರ ಘನ ಉಪಸ್ಥಿತಿ ಇರಲಿದೆ. ವಿಶೇಷ ಅಹ್ವಾನಿತರಾಗಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಮನಗೂಳಿ, ಪುಷ್ಪಾ ಅಮರನಾಥ, ಎಸ್.ಆರ್.ಪಾಟೀಲ್, ಸೂರಜ್ ಹೆಗಡೆ ಆಗಮಿಸಲಿದ್ದಾರೆ.
ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರದ ಸಂಸದರಾದ ಈ.ತುಕಾರಾಮ್, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಎನ್.ರೂಪೇಶ್ ಕುಮಾರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ, ತಾಲೂಕು ಮಟ್ಟದ ವೆಂಕಟರಮಣ.ಡಿ, ಪಿ.ಟಿ.ಭರತ್, ಸೊನ್ನದ್ ಗುರುಬಸವರಾಜ್, ಉದಯಶಂಕರ ಮಾಗನಹಳ್ಳಿ, ಶೇಕ್ ಮಹಮ್ಮದ್ ಜಿಲಾನ್, ಅನಿಲ್ ಹೊಸಮನಿ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಸ್.ಶ್ವೇತಾ, ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ, ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಕೆ.ಸತೀಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟೆಪ್ಪ.ಪಿ.ಎಸ್ ಸ್ವಾಗತಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್