
ವಿಜಯಪುರ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಡಿ 2025-26ನೇ ಸಾಲಿನ ನಾನಾ ಕಲ್ಯಾಣ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಶೇ.24.10%ರ ಯೋಜನೆಡಿಯಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆ, ಶೇ.24.10%ರ ಯೋಜನೆಡಿಯಲ್ಲಿ ವಾರ್ಡ ನಂಬರ್ 04ರ ಹಂಚನಾಳ ತಾಂಡಾದಲ್ಲಿ ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಹಾಗೂ ಶೇ.7.25% ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಅಂತರರಾಷ್ಟ್ರೀಯ, ರಾಷ್ಟಿçಯ, ರಾಜ್ಯ ಹಾಗೂ ಇತರೆ ಕ್ರೀಡಾ ಪಟುಗಳಿಗೆ ಕ್ರೀಡಾ ಸಹಾಯ ಧನ ನೀಡುವ ಯೋಜನೆಯಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಪಾಲಿಕೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನ.15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande