ಮಂಡ್ಯದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ
ಮಂಡ್ಯ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತದ ಉಕ್ಕಿನ ಮನುಷ್ಯ ಹಾಗೂ ರಾಷ್ಟ್ರದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ
Ekata day


ಮಂಡ್ಯ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತದ ಉಕ್ಕಿನ ಮನುಷ್ಯ ಹಾಗೂ ರಾಷ್ಟ್ರದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರತಿಜ್ಞಾ ವಿಧಿಯಲ್ಲಿ ಎಲ್ಲರೂ ದೇಶದ ಏಕತೆ, ಅಖಂಡತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ನಾನಾ ಘಟಕಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕಚೇರಿ ಸಿಬ್ಬಂದಿ ಭಾಗವಹಿಸಿ ಸರ್ದಾರ್ ಪಟೇಲ್ ಅವರ ರಾಷ್ಟ್ರನಿರ್ಮಾಣದ ಕೊಡುಗೆಯನ್ನು ಸ್ಮರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande