ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ವಿಜಯಪುರ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅಲ್ಪಸಂಖ್ಯಾತ ವರ
ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ವಿಜಯಪುರ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ,ಡಿಸಿಇಟಿ,ಪಿಜಿಸಿಇಟಿ,ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‍ಗಳಾದ ವೈದ್ಯಕೀಯ,ದಂತ ವೈದ್ಯಕೀಯ, ಇಂಜಿನೀಯರಿಂಗ್ ಹಾಗೂ ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್,ಅಗ್ರಿಕಲ್ಚರ್ ಇಂಜಿನೀಯರಿಂಗ್ ಸೇರಿದಂತೆ ವಿವಿಧ ಕೋರ್ಸಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12% ರಷ್ಟು ಪಾವತಿಸಬೇಕಾಗಿರುತ್ತದೆ. ಶೆ.12% ರಷ್ಟು ಮೊತ್ತವನ್ನು ಆನ್‍ಲೈನ್ ಮೂಲಕ ಪಾವತಿಸಬೇಕು.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ, ಬೇರೆ-ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು 03-11-2025 ರಿಂದ 03-12-2025ರವರೆಗೆ ಸಲ್ಲಿಸಬಹುದಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು,ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ,ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: 08352-278344 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande