ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಏಕತಾನಗರ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಏಕತಾ ದಿನ ಹಾಗೂ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ
Pm


ಏಕತಾನಗರ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಏಕತಾ ದಿನ ಹಾಗೂ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ಮೋದಿ ಸರ್ದಾರ್ ಪಟೇಲ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿ, ಜನತೆಗೆ ರಾಷ್ಟ್ರೀಯ ಏಕತೆಯ ಪ್ರಮಾಣವಚನ ಬೋಧಿಸಿದರು.

ಬೆಳಿಗ್ಗೆಯಿಂದಲೇ ಪ್ರದೇಶದಲ್ಲಿ ಸಣ್ಣ ಮಳೆ ಸುರಿಯುತ್ತಿದ್ದರೂ, ಗುಜರಾತ್‌ನ ನಾನಾ ಭಾಗಗಳಿಂದ ಸಾವಿರಾರು ಜನರು ಏಕತಾ ದಿನಾಚರಣೆಗೆ ಆಗಮಿಸಿದ್ದರು.

ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಪ್ರಧಾನಿಯವರು ರಾಷ್ಟ್ರೀಯ ಏಕತಾ ದಿನದ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಏಕತಾ ಮೆರವಣಿಗೆಯನ್ನು ವೀಕ್ಷಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande