
ನವದೆಹಲಿ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತದ ಏಕೀಕರಣದ ಶಿಲ್ಪಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, “ಭಾರತದ ಏಕೀಕರಣದ ಹಿಂದಿನ ಸ್ಫೂರ್ತಿ ಸರ್ದಾರ್ ಪಟೇಲ್. ಸ್ವಾತಂತ್ರ್ಯ ನಂತರ ರಾಷ್ಟ್ರದ ಅಡಿಪಾಯವನ್ನು ಬಲಪಡಿಸುವಲ್ಲಿ ಅವರು ಐತಿಹಾಸಿಕ ಪಾತ್ರ ವಹಿಸಿದ್ದರು. ರಾಷ್ಟ್ರೀಯ ಏಕತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಯ ಕಡೆ ಅವರ ಅಚಲ ಬದ್ಧತೆ ಹೊಸ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ,” ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಸಂದೇಶದಲ್ಲಿ, “ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯಂದು ಭಾರತ ಅವರಿಗೆ ಕೃತಜ್ಞತೆ ಸಲ್ಲಿಸುತ್ತದೆ. ಏಕೀಕೃತ, ಬಲಿಷ್ಠ ಮತ್ತು ಸ್ವಾವಲಂಬಿ ಭಾರತದ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಬದ್ಧರಾಗಿದ್ದೇವೆ,” ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa