ಬೆಳಗಾವಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಳಗಾವಿಯಲ್ಲಿ ಕಳೆದ ರಾತ್ರಿ ಉರುಸ್ ಮೆರವಣಿಗೆ ವೇಳೆ ಐ ಲವ್ ಮುಹಮ್ಮದ್ ಘೋಷಣೆ ಹಾಕಿರುವುದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧ ೫೦ ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಲ್ಲು ತೂರಾಟವಾದ ಖಡಕ್ ಗಲ್ಲಿ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ 10 ಜನರ ಹೆಸರು ಉಲ್ಲೇಖಿಸಿ, ಒಟ್ಟು 50 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಈಗಾಗಲೇ ೧೧ ಜನರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಗಾವಿ ನಗರಕ್ಕೆ ಮುಖ್ಯಮಂತ್ರಿ ಭೇಟಿ ನೀಡಲಿದ್ದು ಪೋಲಿಸರು ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa