ಬೆಂಗಳೂರು, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದೆ. ಸಮೀಕ್ಷೆಗಾಗಿ ಸುಮಾರು 32 ಲಕ್ಷ ಮನೆಗಳನ್ನು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂದಿನಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಸಂಪೂರ್ಣವಾಗಿ ಎರಡು ವಾರಗಳಲ್ಲಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸಮೀಕ್ಷೆಗೆ 17,000 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿ ಸಿಬ್ಬಂದಿಗೆ 100–150 ಮನೆಗಳ ಸಮೀಕ್ಷೆ ನಡೆಸಲು ನಿಯೋಜಿಸಲಾಗಿದೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಅಕ್ಟೋಬರ್ 7ಕ್ಕೆ ಸಮೀಕ್ಷೆ ಮುಕ್ತಾಯಗೊಳ್ಳಲಿದೆ. ಬೆಂಗಳೂರು ನಗರದಲ್ಲಿ ಮನೆಗಳ ಸಂಖ್ಯೆಯನ್ನು ಗಮನಿಸಿದರೆ, ಸಮೀಕ್ಷೆ ಮುಕ್ತಾಯಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಅಂದಾಜಿಸಲಾಗಿದೆ. ಇದೇ ವೇಳೆ ಸಮೀಕ್ಷೆ ಪ್ರಾರಂಭದ ಮೊದಲ ದಿನವೇ ಹಲವು ಗೊಂದಲಗಳು ಉಂಟಾಗಿದ್ದು ಸಮೀಕ್ಷೆದಾರರು ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa