ಬೆಳಗಾವಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಆಗಮಿಸಲಿದ್ದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ವಿಶೇಷ ವಿಮಾನದ ಮೂಲಕ 11.30ಕ್ಕೆ ಬೆಳಗಾವಿಗೆ ಆಗಮಿಸುವ ಅವರು ಬಿಮ್ಸ ಆಸ್ಪತ್ರೆ ಆವರಣದಲ್ಲಿ ನೂತನ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನಗರ ಸಾರಿಗೆ ಬಸ್ ನಿಲ್ದಾಣವನ್ನು ಉದ್ಘಾಟಿಸಲಿದ್ದು ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa