ಬೆಳಗಾವಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.
ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದರು.
ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa