ಸೋಮವಾರ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ, 04 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಕೊಪ್ಪಳ
ಅಕ್ಟೋಬರ್ 6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ


ಕೊಪ್ಪಳ, 04 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು. ಅಲ್ಲಿಂದ 11.50ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರದ ಗಂಗಾವತಿ ರಸ್ತೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಭೋಧಕ ಆಸ್ಪತ್ರೆಗೆ ಆಗಮಿಸಿ ವೈದ್ಯಕೀಯ ಶಿಕ್ಷಣ ಇಲಾಖೆ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ವತಿಯಿಂದ ಆಯೋಜಿಸಲಾದ 450 ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಧರ್ಮಶಾಲಾ ಕಟ್ಟಡದ ಉದ್ಘಾಟನಾ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸುವರು.

ನಂತರ ಮಧ್ಯಾಹ್ನ 12.45ಕ್ಕೆ ಕೊಪ್ಪಳ ಸಮೀಪದ ಭಾಗ್ಯನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸುವರು. 1 ಗಂಟೆಗೆ ಕೊಪ್ಪಳ ಬಸ್ ನಿಲ್ದಾಣ ಎದುರುಗಡೆ ಭಕ್ತ ಕನಕದಾಸರ ಪುತ್ಥಳಿ ಅನಾವರಣಗೊಳಿಸುವರು. ಬಳಿಕ ಮಧ್ಯಾಹ್ನ 1.15ಕ್ಕೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಾರುತಿ ಸುಜೂಕಿ ಕಾರ್ ಶೋ ರೂಂ ಎದುರುಗಡೆಯ ಅಗಡಿ ಲೇಔಟನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕಾರ್ಯಕ್ರಮ ಜಿಲ್ಲಾಡಳಿತ ಭವನದಲ್ಲಿ ಕಾಯ್ದಿರಿಸಲಾಗಿದೆ.

ಅಂದು ಸಂಜೆ 4 ಗಂಟೆಗೆ ಅಗಡಿ ಬಡಾವಣೆಯಿಂದ ನಿರ್ಗಮಿಸಿ, 4.15ಕ್ಕೆ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸಿ, ಅಲ್ಲಿಂದ 4.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande