ನವದೆಹಲಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊಲಂಬಿಯಾದಲ್ಲಿ ಭಾರತದ ಪ್ರಜಾಪ್ರಭುತ್ವದ ಸ್ಥಿತಿಯ ಕುರಿತು ನೀಡಿದ ಹೇಳಿಕೆಗಳು ದೇಶದ ಘನತೆಗೆ ಧಕ್ಕೆ ತರುತ್ತವೆ ಎಂದು ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆ ಮೇಲೆ ದಾಳಿ ನಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚು ಕೇಂದ್ರೀಕೃತವಾಗಿದ್ದು, ಕೆಲ ದೊಡ್ಡ ಉದ್ಯಮಿಗಳು ಆರ್ಥಿಕತೆಯನ್ನು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಬೆಂಬಲಿಸಿದ್ದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದಿದ್ದಾರೆ.
ಬಿಜೆಪಿ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತದೆ. ಪ್ರಜಾಪ್ರಭುತ್ವದ ಅಪಹರಣದಿಂದ ದೇಶವೇ ಮುಜುಗರಕ್ಕೆ ಒಳಗಾಗಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa