ರಾಯಚೂರು, 04 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಹೀರಾಪೂರ ಗ್ರಾಮದಲ್ಲಿ ಶ್ರೀ ಆಂಜನೇಯ್ಯಸ್ವಾಮಿ ದೇವಸ್ಥಾನಕ್ಕೆ ಶೆಡ್ ನಿರ್ಮಾಣ ಮತ್ತು ಶ್ರೀ ಮಾರೆಮ್ಮ ದೇವಸ್ಥಾನ ಅಭಿವೃದ್ಧಿಗಾಗಿ ಕೆಕೆಆರ್‍ಡಿಬಿ ಮೈಕ್ರೋ ಯೋಜನೆಡಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಎಲೆಬಿಚ್ಚಾಲಿ, ಕುರ್ಡಿ, ಆರೋಲಿ, ಅಡವಿಖಾನಪೂರ, ಉಡಮಗಲ್ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಗ್ರಾಮ ದೇವತೆ ದ್ಯಾಮವ್ವ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮತ್ತು ನೂತನ ಗುಡಿಯ ಉದ್ಘಾಟನೆ ನೆರವೇರಿಸಿದರು.
ಕುರ್ಡಿ ಗ್ರಾಮದಲ್ಲಿ ಶ್ರೀ ದ್ಯಾಮವ್ವ ದೇವಿಯ ಪುರಾಣದ ಅಂಗವಾಗಿ ಕುಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಹಿರಿಯ ಮುಖಂಡರು, ಆಯಾ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್